ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3,688 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 50 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಿಗ್ಗೆ (ಏಪ್ರಿಲ್ 30) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿನ ಕೊರೊನಾ ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,75,864ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 18,684ಕ್ಕೆ ತಲುಪಿದೆ. ಒಂದೇ ದಿನದಲ್ಲಿ 2,755 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,33,377ಕ್ಕೆ ಏರಿಕೆಯಾಗಿದೆ.
24 ಗಂಟೆಯಲ್ಲಿ 883 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.74ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.74ರಷ್ಟಿದೆ. ಅಲ್ಲದೇ ವಾರದ ಪಾಸಿಟಿವಿಟಿ ದರ ಶೇ.066ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
PublicNext
30/04/2022 11:00 am