ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಶತಕದ ಗಡಿ ದಾಟಿದ್ದು, ಇಳಿಕೆ ಆಗುವಂತೆ ಕಾಣುತ್ತಿಲ್ಲ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 107 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,47,944 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 1.50ರಷ್ಟಿದೆ. ಇಂದು 7,114 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 107 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,06,027 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,060ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,815 ಸಕ್ರಿಯ ಪ್ರಕರಣಗಳಿವೆ.
PublicNext
03/05/2022 07:40 pm