ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಶತಕದ ಗಡಿ ದಾಟಿದ್ದು, ನಿನ್ನೆ (ಶನಿವಾರಕ್ಕಿಂತ) ಇಂದು ಪ್ರಕರಣಗಳು ಸಂಖ್ಯೆ ಕೊಂಚ ಇಳಿಕೆ ಕಂಡಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ನಿನ್ನೆ 181 ಜನರಿಗೆ ಕೊರೊನಾ ದೃಢಪಟ್ಟಿದ್ದರೆ, ಇಂದು 171 ಕೇಸ್ ಪತ್ತೆಯಾಗಿದೆ. ಈವರೆಗೂ 39,48,092 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 1.09ರಷ್ಟಿದೆ. ಇಂದು 15,647 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 121 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,06,587 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,061ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,945 ಸಕ್ರಿಯ ಪ್ರಕರಣಗಳಿವೆ.
PublicNext
07/05/2022 07:55 pm