ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 157 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 3949290 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.87% ರಷ್ಟಿದೆ. ಇಂದು 18001 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 216 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 3907301 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40063 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,884 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.00 ನಷ್ಟಿದೆ.
PublicNext
12/05/2022 08:05 pm