ನವದೆಹಲಿ: ದೇಶದಲ್ಲಿ ಕಳೆದ ಒಂದು ದಿನದ ಅವಧಿಯಲ್ಲಿ 2,202 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,23,801ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ದೇಶಾದ್ಯಂತ ಕಳೆದೊಂದು ದಿನದಲ್ಲಿ 27 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,241 ಮಂದಿ ಸಾವನ್ನಪ್ಪಿದ್ದಾರೆ.
ಸಾವಿನ ಪ್ರಮಾಣ ಶೇ. 1.22 ರಷ್ಟಿದೆ.ದೈನಂದಿನ ಪಾಸಿಟಿವಿಟಿ ದರ ಶೇ. 0.74 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.59 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.74. ಸದ್ಯ ದೇಶದಲ್ಲಿ 17,317 ಸಕ್ರಿಯ ಪ್ರಕರಣಗಳಿವೆ. ನಿನ್ನೆ 2,550 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,25,82,243 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 191.37 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
PublicNext
16/05/2022 01:38 pm