ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತ ಮುಂದುವರೆದಿದ್ದು ಇಂದು 155 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3950378 ಕ್ಕೆ ತಲುಪಿದೆ. ರಾಜ್ಯದಲ್ಲಿ ಇಂದು 166 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3908617 ಕ್ಕೆ ಏರಿಕೆಯಾಗಿದೆ.
ಇನ್ನು 1655 ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಪಾಸಿಟಿವಿಟಿ ಪ್ರಮಾಣ 0.77% ನಷ್ಟಿದೆ. ಇದೇ ವೇಳೆ 20048 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.ಕೊರೊನಾದಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 40064 ಕ್ಕೆ ತಲುಪಿದೆ.
PublicNext
21/05/2022 07:58 pm