ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 208 ಮಂದಿಗೆ ಕೊರೊನಾ: 124 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 208 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಸೋಂಕಿನಿಂದ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 39,50,978 ಜನರಿಗೆ ಸೋಂಕು ತಗುಲಿದ್ದು, 40,064 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 124 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,09,073ಕ್ಕೆ ಏರಿಕೆಯಾಗಿದೆ. ಇನ್ನು 1,799 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 0.90% ನಷ್ಟಿದೆ. ಹಾಗೂ ಮರಣ ಪ್ರಮಾಣ 0.00%ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 23,024 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

Edited By : Nagaraj Tulugeri
PublicNext

PublicNext

25/05/2022 09:38 pm

Cinque Terre

32.75 K

Cinque Terre

0