ಬೆಂಗಳೂರು: ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 153 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಸೋಂಕಿನಿಂದ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 39,51,131 ಜನರಿಗೆ ಸೋಂಕು ತಗುಲಿದ್ದು, 40,064 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 175 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,09,248ಕ್ಕೆ ಏರಿಕೆಯಾಗಿದೆ. ಇನ್ನು 1,777 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 0.72% ನಷ್ಟಿದೆ. ಹಾಗೂ ಮರಣ ಪ್ರಮಾಣ 0.00%ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 21,068 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
26/05/2022 08:08 pm