ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 222 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,53,058 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.93% ರಷ್ಟಿದೆ. ಇಂದು 23,644 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 191 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,10,691 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ.ಈವರೆಗೂ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40065 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2,260 ಸಕ್ರಿಯ ಪ್ರಕರಣಗಳಿವೆ.
PublicNext
04/06/2022 08:02 pm