ಬೆಂಗಳೂರು: ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 301 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 3953359 ಜನರಿಗೆ ಸೋಂಕು ತಗುಲಿದ್ದು, 40066 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 146 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3910837ಕ್ಕೆ ಏರಿಕೆಯಾಗಿದೆ. ಇನ್ನು 2414 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 1.40%ನಷ್ಟಿದೆ. ಹಾಗೂ ಮರಣ ಪ್ರಮಾಣ 0.33%ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 21413 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
05/06/2022 09:09 pm