ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ನಿಧಾನವಾಗಿ ಏರಿಕೆ ಕಾಣುತ್ತಿದೆ. ಅದರಲ್ಲೂ ಕಳೆದ ಮೂರು ತಿಂಗಳಲ್ಲೇ ಇಂದು ಅತಿ ಹೆಚ್ಚು ಕೊರೊನಾ ಕೇಸ್‌ಗಳು ಪತ್ತೆಯಾಗಿವೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 8,329 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 10 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,000 ದಾಟಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 5,24,757ಕ್ಕೆ ಏರಿದೆ.
PublicNext
11/06/2022 10:30 am