ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಾದ್ಯಂತ ಇಂದು 463 ಮಂದಿಗೆ ಸೋಂಕು: 199ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 463 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಸೋಂಕಿನಿಂದ ಇಂದು ಸಾವು ಸಂಭವಿಸಿಲ್ಲ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 39,56,334 ಜನರಿಗೆ ಸೋಂಕು ತಗುಲಿದ್ದು, 40066 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 199ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,12,575ಕ್ಕೆ ಏರಿಕೆಯಾಗಿದೆ. ಇನ್ನು 3,651 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 2.15%ನಷ್ಟಿದೆ. ಹಾಗೂ ಮರಣ ಪ್ರಮಾಣ 0.00ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 21,519 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

Edited By : Nagaraj Tulugeri
PublicNext

PublicNext

12/06/2022 10:30 pm

Cinque Terre

50.1 K

Cinque Terre

1

ಸಂಬಂಧಿತ ಸುದ್ದಿ