ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 415 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,56,749 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 2.56ರಷ್ಟಿದೆ. ಇಂದು 16,190 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 378 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,12,953 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಯಾವುದೇ ಸಾವನ್ನಪ್ಪಿಲ್ಲ. ಈವರೆಗೂ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,066ರಷ್ಟಿದೆ. ರಾಜ್ಯದಲ್ಲಿ ಒಟ್ಟು 3,688 ಸಕ್ರಿಯ ಪ್ರಕರಣಗಳಿವೆ.
PublicNext
13/06/2022 08:25 pm