ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆ ಕಾಣುತ್ತಿದೆ. ನಿನ್ನೆಯಷ್ಟೇ 594 ಜನರಿಗೆ ಸೋಂಕು ದೃಢಪಟ್ಟಿತ್ತು. ಇಂದು ಮತ್ತಷ್ಟು ಏರಿಕೆ ಕಂಡಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 648 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,57,991 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 2.76ರಷ್ಟಿದೆ. ಇಂದು 23,452 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 532 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,13,885 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,067ರಷ್ಟಿದೆ. ರಾಜ್ಯದಲ್ಲಿ ಒಟ್ಟು 3,997 ಸಕ್ರಿಯ ಪ್ರಕರಣಗಳಿವೆ.
PublicNext
15/06/2022 08:26 pm