ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 634 ಮಂದಿಗೆ ಅಂಟಿದ ಕೊರೊನಾ ಸೋಂಕು

ಬೆಂಗಳೂರು: ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 634 ಮಂದಿಗೆ ಸೋಂಕು ತಗುಲಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3959458ಕ್ಕೆ ಏರಿಕೆಯಾಗಿದೆ.

ಇನ್ನು ಇಂದು ಡೆಡ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಒಟ್ಟು ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 40070ಕ್ಕೆ ತಲುಪಿದೆ. ಇಂದು ಸೋಂಕಿನಿಂದ ಸುಧಾರಿಸಿಕೊಂಡು 503 ಜನ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗುವ ಮೂಲಕ ಈವರೆಗೂ ಡಿಸ್ಜಾರ್ಜ್ ಆದವರ ಸಂಖ್ಯೆ 3914846ಕ್ಕೆ ತಲುಪಿದೆ.

ಇನ್ನು 4500 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 2.70% ನಷ್ಟಿದೆ. ಹಾಗೂ ಮರಣ ಪ್ರಮಾಣ 0.31% ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 22586 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

Edited By : Nirmala Aralikatti
PublicNext

PublicNext

17/06/2022 09:08 pm

Cinque Terre

18.91 K

Cinque Terre

0