ಬೆಂಗಳೂರು: ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 750 ಮಂದಿಗೆ ಸೋಂಕು ತಗುಲಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3960208ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಡೆಡ್ಲಿ ಸೋಂಕಿಗೆ ಯಾವ ಸಾವು ಸಂಭವಿಸಿಲ್ಲ. ಈದುರೆಗೂ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 40070ಕ್ಕೆ ತಲುಪಿದೆ. ಇಂದು ಸೋಂಕಿನಿಂದ ಸುಧಾರಿಸಿಕೊಂಡು 425 ಜನ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗುವ ಮೂಲಕ ಈವರೆಗೂ ಡಿಸ್ಜಾರ್ಜ್ ಆದವರ ಸಂಖ್ಯೆ 3915271ಕ್ಕೆ ತಲುಪಿದೆ.
ಇನ್ನು 4825 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 3.06%ನಷ್ಟಿದೆ. ಹಾಗೂ ಮರಣ ಪ್ರಮಾಣ 0.00%ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 24469 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
18/06/2022 10:08 pm