ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 133 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,64,835 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.40% ರಷ್ಟಿದೆ. ಇಂದು 32575 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 517 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು3920283 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ.ಈವರೆಗೂ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40072 ಇದೆ. ರಾಜ್ಯದಲ್ಲಿ ಒಟ್ಟು 4438 ಸಕ್ರಿಯ ಪ್ರಕರಣಗಳಿವೆ.
PublicNext
26/06/2022 09:03 pm