ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 617 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,60,831 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 3.12ರಷ್ಟಿದೆ. ಇಂದು 19,757 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 767 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,21,050 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 40,072 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 4,288 ಸಕ್ರಿಯ ಪ್ರಕರಣಗಳಿವೆ.
PublicNext
27/06/2022 07:17 pm