ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 968 ಜನರಿಗೆ ಕೊರೊನಾ ದೃಢ- ಒಬ್ಬರು ಸಾವು

ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 968 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,66,420 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 5.44ರಷ್ಟಿದೆ. ಇಂದು 17,784 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 337 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,21,387 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 40,073 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 4,918 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

28/06/2022 10:27 pm

Cinque Terre

52.53 K

Cinque Terre

1