ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 1,073 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,70,484 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 4.19ರಷ್ಟಿದೆ. ಇಂದು 25,587 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 834 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,24,232 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 40,076 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 6,134 ಸಕ್ರಿಯ ಪ್ರಕರಣಗಳಿವೆ.
PublicNext
01/07/2022 08:23 pm