ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,103 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 31 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಈವರೆಗೆ ದೇಶದಲ್ಲಿ ದಾಖಲಾದ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,35,02,429 ರಷ್ಟಾಗಿದ್ದು, ಮೃತಪಟ್ಟ ಸೋಂಕಿತರ ಸಂಖ್ಯೆ 5,25,199ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,11,711ಕ್ಕೆ ಏರಿದ್ದು, ಪ್ರತಿದಿನದ ಪಾಸಿಟಿವಿಟಿ ದರವು ಶೇ 4.27 ರಷ್ಟಿದೆ.
PublicNext
03/07/2022 11:16 am