ಬೆಂಗಳೂರು: ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 826 ಮಂದಿಗೆ ಸೋಂಕು ತಗುಲಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3972285ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಡೆಡ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಆ ಮೂಲಕ ಈದುರೆಗೂ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 40077ಕ್ಕೆ ತಲುಪಿದೆ. ಇಂದು ಸೋಂಕಿನಿಂದ ಸುಧಾರಿಸಿಕೊಂಡು 600 ಜನ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗುವ ಮೂಲಕ ಈವರೆಗೂ ಡಿಸ್ಜಾರ್ಜ್ ಆದವರ ಸಂಖ್ಯೆ 3925500ಕ್ಕೆ ತಲುಪಿದೆ.
ಇನ್ನು 6666 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 3.25%ನಷ್ಟಿದೆ. ಹಾಗೂ ಮರಣ ಪ್ರಮಾಣ 0.00ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 25348 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
03/07/2022 11:09 pm