ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಳೆದ 24 ಗಂಟೆಗಳಲ್ಲಿ ದೇಶದ 18,840 ಜನರಿಗೆ ಕೊರೊನಾ ದೃಢ- 43 ಮಂದಿ ಬಲಿ

ನವದೆಹಲಿ: ಭಾರತದಲ್ಲಿ ಮತ್ತೆ ಹೊಸ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 18,840 ಜನರಿಗೆ ಸೋಂಕು ದೃಢಪಟ್ಟಿದ್ದು, 43 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದೊಂದು ದಿನದಲ್ಲಿ 16,104 ಜನರು ಕೋವಿಡ್​​ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಈವರೆಗೆ ಒಟ್ಟು 4,29,53,980 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 1,25,028 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,25,386ಕ್ಕೆ ಏರಿಕೆಯಾಗಿದೆ. ಈವರೆಗೆ ದೃಢಪಟ್ಟ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,36,04,394 ತಲುಪಿದೆ.

Edited By : Vijay Kumar
PublicNext

PublicNext

09/07/2022 10:56 am

Cinque Terre

34.57 K

Cinque Terre

0