ಬೆಂಗಳೂರು: ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 1231 ಮಂದಿಗೆ ಸೋಂಕು ತಗುಲಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3981816ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಡೆಡ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಆ ಮೂಲಕ ಈದುರೆಗೂ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 40083 ಕ್ಕೆ ತಲುಪಿದೆ. ಇಂದು ಸೋಂಕಿನಿಂದ ಸುಧಾರಿಸಿಕೊಂಡು 1047 ಜನ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗುವ ಮೂಲಕ ಈವರೆಗೂ ಡಿಸ್ಜಾರ್ಜ್ ಆದವರ ಸಂಖ್ಯೆ 3935088ಕ್ಕೆ ತಲುಪಿದೆ.
ಇನ್ನು 6603 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 4.78% ನಷ್ಟಿದೆ. ಹಾಗೂ ಮರಣ ಪ್ರಮಾಣ 0.00% ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 25743 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
13/07/2022 06:48 pm