ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,562ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 39,93,171 ಜನರಿಗೆ ಸೋಂಕು ತಗುಲಿದ್ದು, 40,090 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,107ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,44,551ಕ್ಕೆ ಏರಿಕೆಯಾಗಿದೆ. ಇನ್ನು 8,488ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆ ಪ್ರಮಾಣ 4.67%ನಷ್ಟಿದೆ. ಹಾಗೂ ಮರಣ ಪ್ರಮಾಣ 0. 00%ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 33,391ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
PublicNext
22/07/2022 08:46 pm