ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 1,425 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ39,98,142 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 6.15ರಷ್ಟಿದೆ. ಇಂದು 23,150 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,459 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,49,147 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 40,092 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 8,861 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದು 1,198 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 18,29,306ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ಬೆಂಗಳೂರಿನ 1,241 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 18,04,828ಕ್ಕೆ ಏರಿಕೆ ಕಂಡಿದೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,973 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,504 ಸಕ್ರಿಯ ಪ್ರಕರಣಗಳಿವೆ.
ಧಾರವಾಡ: ಜಿಲ್ಲೆಯಲ್ಲಿ ಇಂದು 17 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೂ ಒಟ್ಟು 84,541 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಐವರು ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 83,043 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇಂದು ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 1,387 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ 104 ಸಕ್ರಿಯ ಪ್ರಕರಣಗಳಿಲ್ಲ.
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು 12 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೂ ಒಟ್ಟು 1,36,157 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಇಂದು 11 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 1,34,218 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,842 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 87 ಸಕ್ರಿಯ ಪ್ರಕರಣಗಳಿವೆ.
ಉಡುಪಿ: ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈವರೆಗೂ ಒಟ್ಟು 95,837 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು 11 ಜನ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 95,253 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 546 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 38 ಸಕ್ರಿಯ ಪ್ರಕರಣಗಳಿವೆ.
PublicNext
26/07/2022 08:12 pm