ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 1,624 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,99,766 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 4.87ರಷ್ಟಿದೆ. ಇಂದು 33,336 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,647 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 39,50,794 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 40,094 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 8,836 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದು 1,176 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 18,30,482 ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ಬೆಂಗಳೂರಿನ 1,381 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 18,06,209ಕ್ಕೆ ಏರಿಕೆ ಕಂಡಿದೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,973 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,299 ಸಕ್ರಿಯ ಪ್ರಕರಣಗಳಿವೆ.
ಧಾರವಾಡ: ಜಿಲ್ಲೆಯಲ್ಲಿ ಇಂದು 58 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೂ ಒಟ್ಟು 84,599 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು 38 ಜನರಿಗೆ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 83,081 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೂ ಒಟ್ಟು 1,387 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ 124 ಸಕ್ರಿಯ ಪ್ರಕರಣಗಳಿಲ್ಲ.
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು 20 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೂ ಒಟ್ಟು 1,36,177 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಇಂದು 29 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 1,34,247 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇಂದು ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 1,843 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 77 ಸಕ್ರಿಯ ಪ್ರಕರಣಗಳಿವೆ.
ಉಡುಪಿ: ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈವರೆಗೂ ಒಟ್ಟು 95,841 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು 15 ಜನ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 95,268 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇಂದು ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟು 547 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 26 ಸಕ್ರಿಯ ಪ್ರಕರಣಗಳಿವೆ.
PublicNext
27/07/2022 09:31 pm