ಕೊಡಗು: ಇತ್ತೀಚಿನ ದಿನಗಳಲ್ಲಿ ಕೊರೊನಾ ಹರಡುವಿಕೆ ಸಂಖ್ಯೆ ನಿಧಾನವಾಗಿ ಏರುತ್ತಿದೆ. ಮಡಿಕೇರಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಮಾಹಿತಿ ನೀಡಿರುವ ಮೆಡಿಕಲ್ ಕಾಲೇಜಿನ ಡೀನ್ ಕಳ್ಳಿಚಂಡ ಕಾರ್ಯಪ್ಪ, ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 46 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಯಾವುದೇ ವಿದ್ಯಾರ್ಥಿಗೆ ಗಂಭೀರ ಸೋಂಕಿಲ್ಲ. 150 ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಗತಿ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
PublicNext
31/07/2022 01:21 pm