ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ಏಕಾಏಕಿ ಕೊರೊನಾ ಏರಿಕೆ; ಒಂದೇ ದಿನದಲ್ಲಿ 15 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ದೃಢ- 47 ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 15,754 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 47 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,43,14,318ಕ್ಕೆ ಏರಿಕೆಯಾಗಿದೆ. ಆ ಪೈಕಿ 5,27,253 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 4,36,85,535 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,01,830 ಸಕ್ರಿಯ ಪ್ರಕರಣಗಳಿವೆ.

ಪಂಜಾಬ್‌ನಲ್ಲಿ 15,545, ಮಹಾರಾಷ್ಟ್ರದಲ್ಲಿ 11,690, ಕರ್ನಾಟಕದಲ್ಲಿ 9,307, ಕೇರಳದಲ್ಲಿ 7,920, ದೆಹಲಿಯಲ್ಲಿ 6,826 ತಮಿಳುನಾಡಿನಲ್ಲಿ 6,400 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ ಶೇ 3.47 ರಷ್ಟಿದೆ. ದೇಶದಾದ್ಯಂತ ಒಟ್ಟು 209.27 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ನಿನ್ನೆ (ಗುರುವಾರ) 31,52,882 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,09,27,32,604 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,54,491 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Edited By : Vijay Kumar
PublicNext

PublicNext

19/08/2022 12:11 pm

Cinque Terre

34.45 K

Cinque Terre

2