ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಈಗ ಮಧ್ಯಂತರ ಜಾಮೀನು ಮಂಜೂರಾದ ನಂತರ ಹೊರಬಂದಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ಅವರು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ, ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ನಟ ದರ್ಶನ್ ತೆರಳಿದ್ದಾರೆ. ಬಿಜಿಎಸ್ ಆಸ್ಪತ್ರೆಗೆ ಬೆನ್ನುನೋವಿನ ಚಿಕಿತ್ಸೆಗಾಗಿ ದಾಖಲಾಗಿರುವ ಅವರನ್ನು ವೈದ್ಯರು ವಿವಿಧ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಆ ಬಳಿಕ ಬೆನ್ನು ನೋವಿಗೆ ಶಸ್ತ್ರ ಚಿಕಿತ್ಸೆ ಮಾಡಲಿದ್ದೇವೆ ಎಂದು ನ್ಯೂರೋಲಾಜಿಸ್ಟ್ ಡಾ. ನವೀನ್ ಮಾಹಿತಿ ನೀಡಲಿದ್ದಾರೆ.
PublicNext
01/11/2024 04:10 pm