ದೆಹಲಿ: ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ನಟ ಚಿರಂಜೀವಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ.
'ಆಚಾರ್ಯ' ಶೂಟಿಂಗ್ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ.
ಈ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಸದ್ಯ ಚಿರಂಜೀವಿ ಹೋಮ್ ಕ್ವಾರೆಂಟೈನ್ನಲ್ಲಿದ್ದಾರೆ. ಐದು ದಿನಗಳಿಂದ ಯಾರೆಲ್ಲ ನನ್ನ ಸಂಪರ್ಕಕ್ಕೆ ಬಂದಿದ್ದೀರೋ ದಯವಿಟ್ಟು ಅವರೆಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ.
ಆರೋಗ್ಯದತ್ತ ಜಾಗ್ರತೆ ವಹಿಸಿ' ಎಂದು ಚಿರಂಜೀವಿ ಮನವಿ ಮಾಡಿದ್ದಾರೆ.
PublicNext
09/11/2020 12:21 pm