ಹೈದರಾಬಾದ್: ಟಾಲಿವುಡ್ ಖ್ಯಾತ ನಟ ಚಿರಂಜೀವಿ ಕೊನಿಡೆಲಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮೂಲಕ ಅವರು ಖಚಿತಪಡಿಸಿದ್ದಾರೆ. ಆಚಾರ್ಯ ಚಿತ್ರದ ಚಿತ್ರೀಕರಣ ಆರಂಭಿಸುವುದಕ್ಕೂ ಮುನ್ನ ಕೊರೊನಾ ಟೆಸ್ಟ್ ಗೆ ಒಳಗಾಗಿದ್ದೆ. ಈ ವೇಳೆ ವರದಿ ಪಾಸಿಟಿವ್ ಬಂದಿದೆ. ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಹೀಗಾಗಿ ಮನೆಯಲ್ಲೇ ಸ್ವಯಂ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಗಾಗಬೇಕೆಂದು ವಿನಂತಿಸುತ್ತೇನೆ. ನನ್ನ ಆರೋಗ್ಯದ ಸ್ಥಿತಿಯ ಬಗ್ಗೆ ನಿಮಗೆ ಶೀಘ್ರವೇ ಅಪ್‍ಡೇಟ್ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಲೆಟರ್ ಹೆಡ್ ಇರುವ ಪತ್ರವನ್ನು ಹಂಚಿಕೊಳ್ಳುವ ಮೂಲಕ ಚಿರಂಜೀವಿ ಈ ಕುರಿತು ಖಚಿತಪಡಿಸಿದ್ದಾರೆ. ಸದ್ಯ ಹೋಮ್ ಐಸೋಲೇಶನ್‍ಗೆ ಒಳಪಟ್ಟಿದ್ದಾರೆ.
PublicNext
12/11/2020 12:57 pm