ಮುಂಬೈ:ಬಾಲಿವುಡ್ ನಟಿ ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೋವಿಡ್ ಸೋಂಕು ತಗುಲಿದೆ. ಆದರೆ, ಇವರು ಕೋವಿಡ್ ನಿಯಮಗಳನ್ನ ಉಲ್ಲಂಘಿಸಿ ಹತ್ತು ಹಲವು ಪಾರ್ಟಿಗಳಿಗೆ ಹೋಗಿ ಬಂದಿದ್ದಾರೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಆರೋಪಿಸಿದೆ.
ಕರೀನಾ ಕಪೂರ್ ಮತ್ತು ಅಮೃತಾ ಅರೋರಾ ಕೋವಿಡ್ ಸೋಂಕು ತಗುಲಿರೋದು ಸೋಮವಾರ ಗೊತ್ತಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಹಲವು ಪಾರ್ಟಿಗಳಲ್ಲೂ ಭಾಗಿ ಆಗಿದ್ದಾರೆ. ಅದಕ್ಕೇನೆ ಈಗಾಗಲೇ ಇವರ ಸಂಪರ್ಕಕ್ಕೆ ಬಂದಿದ್ದ ಪ್ರತಿಯೊಬ್ಬರು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಮಾಡಿಸಿಕೊಳ್ಳಿ ಅಂತಲೇ ಹೇಳಲಾಗಿದೆ.
ಪ್ರಸ್ತುತ ಮಹಾರಾಷ್ಟ್ರದಲ್ಲಿ 10,120 ಕೋವಿಡ್ ಸಕ್ರಿಯ ಪ್ರಕರಣಗಳು ದಾಖಲಾಗಿವೆ.
PublicNext
13/12/2021 05:14 pm