ಮುಂಬೈ: ಬಾಲಿವುಡ್ ನಟ ಹಾಗೂ ನಿರ್ಮಾಪಕ ಜಾನ್ ಅಬ್ರಹಾಂ ಪತ್ನಿ ಪ್ರಿಯಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿದೆ. ಸದ್ಯ ದಂಪತಿ ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಸ್ವತಃ ಜಾನ್ ಅಬ್ರಹಾಂ ಅವರೇ ತಮ್ಮ ಇನ್ಸ್ಟಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕೋವಿಡ್ ಪಾಸಿಟಿವ್ ಬಂದಿದ್ದ ವ್ಯಕ್ತಿಯನ್ನು ಮೂರು ದಿನಗಳ ಹಿಂದೆ ಸಂಪರ್ಕಿಸಿದ್ದೆ. ಇದೀಗ ನನಗೂ ಹಾಗೂ ನನ್ನ ಪತ್ನಿಗೂ ಸೋಂಕು ತಗುಲಿದ್ದು, ಇಬ್ಬರೂ ಹೋಮ್ ಕ್ವಾರಂಟೈನ್‌ನಲ್ಲಿದ್ದೇವೆಂದು ಹೇಳಿದ್ದಾರೆ. ಇಬ್ಬರೂ ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದೆವು. ನೀವೆಲ್ಲೂ ಸುರಕ್ಷಿತ ಹಾಗೂ ಆರೋಗ್ಯಯುತವಾಗಿರಿ. ಮಾಸ್ಕ್ ಧರಿಸಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
PublicNext
03/01/2022 01:38 pm