ಹೈದರಾಬಾದ್: ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಈ ಬಗ್ಗೆ ಟ್ವಿಟ್ಟರ್ ಮೂಲಕ ತಿಳಿಸಿರುವ ಚಿರಂಜೀವಿ, ನನಗೆ ಕೋವಿಡ್-19 ಸೋಂಕಿನ ಕೆಲ ಲಕ್ಷಣಗಳು ಕಾಣಿಸಿಕೊಂಡ ಕಾರಣ ಟೆಸ್ಟ್ ಮಾಡಿಸಿದಾಗ ಕಳೆದ ರಾತ್ರಿ ಕೊರೊನಾ ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ. ನಾನು ಮನೆಯಲ್ಲೇ ಐಸೋಲೇಷನ್‍ಗೆ ಒಳಗಾಗಿದ್ದೇನೆ. ಕೆಲದಿನಗಳಿಂದ ನನ್ನ ಸಂಪರ್ಕಕ್ಕೆ ಯಾರೆಲ್ಲ ಬಂದಿದ್ದೀರಿ ಅವರೆಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ. ಆದಷ್ಟು ಬೇಗ ಗುಣಮುಖಗೊಂಡು ನಿಮ್ಮ ಮುಂದೆ ಬರುತ್ತೇನೆ ಎಂದಿದ್ದಾರೆ.
PublicNext
26/01/2022 01:50 pm