ನವದೆಹಲಿ: ಡ್ರಗ್ಸ್ ಪ್ರಕರಣದ ಸಂಬಂಧ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ವಿಚಾರಣೆ ನಡೆಸಿದ್ದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೋ (ಎನ್‍ಸಿಬಿ) ಡೆಪ್ಯೂಟಿ ಡೈರೆಕ್ಟರ್ ಕೆಪಿಎಸ್ ಮಲ್ಹೋತ್ರಾ ಅವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ.
ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಸಾವಿನ ತನಿಖೆಯ ವೇಳೆ ಬಾಲಿವುಡ್ ಡ್ರಗ್ಸ್ ದಂಧೆಯ ಬಗ್ಗೆ ಎನ್‌ಸಿಬಿ ತನಿಖೆ ನಡೆಸುತ್ತಿದೆ. ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಾಕುಲ್ ಪ್ರೀತ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಅಷ್ಟೇ ಅಲ್ಲದೆ ಶೀಘ್ರದಲ್ಲೇ ಮತ್ತಷ್ಟು ಜನರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ.
PublicNext
04/10/2020 03:08 pm