ಬೆಂಗಳೂರು: ಕೋವಿಡ್ ಆತಂಕದಿಂದಾಗಿ ಚಿತ್ರಮಂದಿರಗಳ ಮೇಲೆ ಹೇರಿದ್ದ ನಿರ್ಬಂಧವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಇಂದು ವಾಪಸ್ ಪಡೆದಿದೆ. ಇದರಿಂದಾಗಿ ನಾಳೆ(ಫೆಬ್ರವರಿ 5)ರಿಂದಲೇ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ (ಶೇ. 100 ಆಸನ ಭರ್ತಿ)ಗೆ ಕರ್ನಾಟಕ ಸರ್ಕಾರ ಅನುಮತಿ ನೀಡಿದೆ.
ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಸಚಿವರು, ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರು, ಮುಖ್ಯ ಕಾರ್ಯದರ್ಶಿಗಳು ಸಭೆ ನಡೆಯಿತು. ಈ ಸಭೆಯಲ್ಲಿ ಚಿತ್ರಮಂದಿರಗಳು, ಜಿಮ್ ಮತ್ತು ಈಜುಕೊಳಗಳಲ್ಲಿ ಶೇ. 100 ಭರ್ತಿಗೆ ಅನುಮತಿ ನೀಡಲು ನಿರ್ಧರಿಸಲಾಯಿತು.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, 'ಕೊರೊನಾ ನಿಯಮಗಳಿಂದ ಚಲನಚಿತ್ರ ಮಂದಿರಗಳು, ನಿರ್ಮಾಪಕರು ಹಾಗೂ ಚಿತ್ರೋದ್ಯಮದಲ್ಲಿ ತೊಡಗಿರುವವರಿಗೆ ನಷ್ಟ ಉಂಟಾಗುತ್ತಿದೆ ಎಂಬುದು ನಮಗೆ ತಿಳಿದಿದೆ. ಹೀಗಾಗಿ ಅಭಿಮಾನಿಗಳಿಗೆ ಹಾಗೂ ಚಿತ್ರೋದ್ಯಮದವರಿಗೆ ಪೂರಕವಾದಂತಹ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಇವತ್ತು ಒಂದು ನಿರ್ಧಾರ ತೆಗೆದುಕೊಂಡಿದ್ದೇವೆ. ಅದೇನು ಅಂದ್ರೆ, ನಾಳೆಯಿಂದ (ಫೆಬ್ರವರಿ 5) ಚಿತ್ರೋದ್ಯಮದವರಿಗೆ ಅನುಕೂಲವಾಗುವಂತೆ ಚಿತ್ರಮಂದಿರಗಳಲ್ಲಿ 100% ಸೀಟು ಭರ್ತಿಗೆ ಅವಕಾಶವನ್ನು ನಾವು ಕೊಟ್ಟಿದ್ದೇವೆ' ಎಂದು ತಿಳಿಸಿದರು.
PublicNext
04/02/2022 03:35 pm