ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

Breaking: S.P ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಮತ್ತೆ ಗಂಭೀರ

ಗಾಯಕ S.P ಬಾಲಸುಬ್ರಮಣ್ಯಂ ಆರೋಗ್ಯ ಮತ್ತೆ ಗಂಭೀರ ಸ್ಥಿತಿ ತಲುಪಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಚೆನ್ನೈ ಆಸ್ಪತ್ರೆ ವೈದ್ಯರು ಗುರುವಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.

ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಪಿ ಬಾಲಸುಬ್ರಮಣ್ಯಂ ಅವರು ಈಗಲೂ ಇಸಿಎಂಒ ಮತ್ತು ಲೈಫ್ ಸಪೋರ್ಟ್ ನಲ್ಲಿದ್ದಾರೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಎಸ್ ಪಿ ಬಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದೆ.

Edited By :
PublicNext

PublicNext

24/09/2020 07:46 pm

Cinque Terre

174.99 K

Cinque Terre

19