ಬೆಂಗಳೂರು : ಇತ್ತೀಚೆಗೆ ಕೆಜಿಎಫ್ 2 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಬಂದೂಕಿನಿಂದ ರಾಕಿಂಗ್ ಸ್ಟಾರ್ ಸಿಗರೇಟ್ ಹಚ್ಚುವ ಸೀನ್ ಜನರನ್ನು ಮೋಡಿ ಮಾಡಿತ್ತು. ಈಗ ಅದೇ ಸೀನ್ ನಿಂದಾಗಿ ರಾಕಿಂಗ್ ಸ್ಟಾರ್ ಯಶ್ಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.
ಕೆಜಿಎಫ್-2 ಟೀಸರ್ ನಲ್ಲಿ ಸಿಗರೇಟ್ ಸೇದುವ ದೃಶ್ಯಕ್ಕೆ ಕತ್ತರಿ ಹಾಕಲು ಸೂಚಿಸಿದೆ.
ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ 2003, ಸೆಕ್ಷನ್ 5 ರ ಪ್ರಕಾರ ನಿಬಂಧನೆಗಳ ಉಲ್ಲಂಘನೆಯಾಗಿದೆ. ನೀವು ಲಕ್ಷಾಂತರ ಜನ ಯುವ ಅಭಿಮಾನಿಗಳನ್ನ ಹೊಂದಿದ್ದೀರಾ ಅವರು ನಿಮ್ಮನ್ನ ಅನುಸರಿಸುತ್ತಾರೆ. ಯುವ ಸಮುದಾಯ ಸಿಗರೇಟ್ ಸೇದುವ ಪ್ರಚೋದನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಇರುವ ಟೀಸರ್ ನಲ್ಲಿ ಸಿಗರೇಟ್ ಸೇದುವ ದೃಶ್ಯ ತೆಗೆಯಿರಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
PublicNext
13/01/2021 10:51 am