ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಮಿಳು ನಟ ಸೂರ್ಯಗೆ ಕೊರೊನಾ ಸೋಂಕು ದೃಢ

ಚೆನ್ನೈ: ತಮಿಳು ನಟ ಸೂರ್ಯ ಅವರಿಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿದೆ. ಈ ಕುರಿತಂತೆ ನಟ ಸೂರ್ಯ ತಮ್ಮ ಟ್ವಿಟರ್ ಖಾತೆಯಲ್ಲಿ​ ಪೋಸ್ಟ್​ ಮಾಡಿದ್ದಾರೆ. ಇದೀಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಕುರಿತಂತೆ ಅಭಿಮಾನಿಗಳೆಲ್ಲ ಸೂರ್ಯ ಬೇಗ ಚೇತರಿಕೊಳ್ಳುವಂತೆ ಪ್ರಾರ್ಥಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡುವ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂಬುದಾಗಿ ಧೈರ್ಯ ತುಂಬಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸೂರ್ಯ, ನನಗೆ ಕೊರೊನಾ ವೈರಸ್ ತಗುಲಿದೆ. ಆಸ್ಪತ್ರೆಯಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ. ಜೀವನ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಆರೋಗ್ಯದ ಕಡೆಗೆ ಗಮನ ಕೊಡಬೇಕು. ನನ್ನನ್ನು ಆರೈಕೆ ಮಾಡಿದ ವೈದ್ಯರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Edited By : Nagaraj Tulugeri
PublicNext

PublicNext

08/02/2021 11:44 am

Cinque Terre

65.96 K

Cinque Terre

2

ಸಂಬಂಧಿತ ಸುದ್ದಿ