ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ಹರಡುವಿಕೆಯಲ್ಲಿ ಮತ್ತೆ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 30,941 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನ350 ಸೋಂಕಿತರು ಸಾವನ್ನಪ್ಪಿದ್ದು, 36,275 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾರತದಲ್ಲಿ ಈವೆರೆಗೆ ಒಟ್ಟು 3,27,68,880 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 4,38,560 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 3,70,640 ಸಕ್ರಿಯ ಪ್ರಕರಣಗಳಿದ್ದು, 3,19,59,680 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
PublicNext
31/08/2021 12:27 pm