ಚೆನ್ನೈ : ಬಾಹುಬಲಿ ಕಟ್ಟಪ್ಪ ಖ್ಯಾತಿಯ ಹಿರಿಯ ನಟ ಆಸ್ಪತ್ರೆಗೆ ದಾಖಲು ಸತ್ಯರಾಜ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಚಿಕಿತ್ಸೆ ಪಡೆಯುತ್ತಿರುವ ನಟನಿಗೆ ಜನವರಿ 7ರಂದು ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಮನೆಯಲ್ಲೇ ಕ್ವಾರೆಂಟೈನ್ ಆಗಿದ್ದರು. ನಟನ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕೃತ ಹೇಳಿಕೆ ಇನ್ನೂ ಬಿಡುಗಡೆಯಾಗಿಲ್ಲ. ತೀವ್ರ ಸ್ವರೂಪದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ನಟ ಆಸ್ಪತ್ರೆಗೆ ತುರ್ತಾಗಿ ಧಾವಿಸಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಲ್ಲಿ ತೆಲುಗು ಚಿತ್ರರಂಗದ ಹಲವಾರು ನಟ-ನಟಿಯರಿಗೆ ಕೋವಿಡ್ -19 ಗೆ ಪಾಸಿಟಿವ್ ದೃಢಪಟ್ಟಿದೆ.
PublicNext
08/01/2022 01:51 pm