ಮುಂಬೈ: ಪ್ರಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.
ಈ ನಡುವೆ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜನವರಿ 11ರಂದು ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಭಾರತರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರು ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲತಾ ಮಂಗೇಶ್ಕರ್ ಅವರನ್ನು ಕಾಣಲು ಬರುವವರಿಗೆ ವೈದ್ಯರು ನಿರ್ಬಂಧ ಹೇರಿದ್ದಾರೆ.
PublicNext
16/01/2022 08:57 pm