ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು 7,339 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, 122 ಮಂದಿ ಬಲಿಯಾಗಿದ್ದಾರೆ.
ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,26,876ಕ್ಕೆ ಏರಿಕೆಯಾದರೆ, ಇಲ್ಲಿವರೆಗೂ ಹೆಮ್ಮಾರಿಗೆ 8,145 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇನ್ನೂ ಡೆಡ್ಲಿ ಸೋಂಕಿನಿಂದ ಸುಧಾರಿಸಿಕೊಂಡ 9,925 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 4,23,377 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇನ್ನೂ 95,335 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
PublicNext
21/09/2020 07:23 pm