ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ‘ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇರುತ್ತೇನೆ. ಯಾವುದೇ ರೋಗ ಲಕ್ಷಣ ಇಲ್ಲದಿರುವುದರಿಂದ ಯಾವುದೇ ರೀತಿ ಆತಂಕವಿಲ್ಲ’ ಎಂದು ಹೇಳಿದ್ದಾರೆ.
PublicNext
05/10/2020 07:34 pm