ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2021ರ ಆರಂಭದಲ್ಲಿ ಭಾರತಕ್ಕೆ ಕೊರೊನಾ ಲಸಿಕೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

ನವದೆಹಲಿ: ಕೊರೊನಾ ಸೋಂಕು ತಡೆಗೆ ಲಸಿಕೆ ಕಂಡು ಹಿಡಿಯುವ ಪ್ರಯೋಗಗಳು ಅಂತಿಮ ಹಂತದಲ್ಲಿದ್ದು, ಭಾರತಕ್ಕೆ 2021ರ ಆರಂಭದಲ್ಲಿ ಕೊರೊನಾ ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ಕುರಿತು ಹರ್ಷವರ್ಧನ್ ಅವರು, ನಿತ್ಯ ಸರಾಸರಿ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ತಜ್ಞರ ತಂಡ ಸಂಶೋಧನೆ ನಡೆಸುತ್ತಿದೆ, ಕೊರೊನಾ ಸೋಂಕಿಗೆ 2021ರ ಆರಂಭದಲ್ಲಿ ಲಸಿಕೆ ಲಭ್ಯವಾಗುವ ನಿರೀಕ್ಷೆಗಳಿವೆ. ಆದರೆ, ಲಸಿಕೆ ಜನರಿಗೆ ತಲುಪಲು ಹೆಚ್ಚಿನ ಸಮಯ ಬೇಕಾಗುತ್ತದೆ.

ಲಸಿಕೆ ಕಂಡು ಹಿಡಿಯಲು ಇತರೆ ರಾಷ್ಟ್ರಗಳಂತೆ ಭಾರತ ಕೂಡ ಸತತ ಪ್ರಯತ್ನಗಳನ್ನು ನಡೆಸುತ್ತಿದೆ. ಲಸಿಕೆ ಕಂಡು ಹಿಡಿಯಲು ಸಂಶೋಧನೆಗಳೂ ಕೂಡ ತೀವ್ರಗೊಂಡಿದೆ. ಸಮರ್ಪಕ ರೀತಿಯಲ್ಲಿ ಸೋಂಕು ತಡೆಗೆ ಸರ್ಕಾರ ಕ್ರಮ ಕೈಗೊಂಡಿದ್ದು ಕೊರೊನಾ ಪರಿಸ್ಥಿತಿಯನ್ನು ನಿರ್ವಹಿಸಿದೆ ಎಂದು ಹರ್ಷವರ್ಧನ್ ಅವರು ಹೇಳಿದ್ದಾರೆ.

Edited By :
PublicNext

PublicNext

18/09/2020 09:18 am

Cinque Terre

78.12 K

Cinque Terre

5