ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋವಿಡ್ ಸೋಂಕಿತ ಆಸ್ಪತ್ರೆಯಿಂದ ಪರಾರಿ : ಪ್ರಕರಣ ದಾಖಲು

ದೊಡ್ಡಬಳ್ಳಾಪುರ : ವಿದೇಶದಿಂದ ಆಗಮಿಸಿದ ವ್ಯಕ್ತಿಗೆ ಕೋವಿಡ್ ಸೋಂಕು ಧೃಡಪಟ್ಟ ಹಿನ್ನಲೆ ತಾಲೂಕಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಪರಾರಿಯಾಗಿದ್ದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದೇಶದಿಂದ ಬರುವ ಪ್ರಯಾಣಿಕರನ್ನ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಮಾಡಲಾಗಿದ್ದು, ಕೋವಿಡ್ ಸೋಂಕು ದೃಢಪಟ್ಟ ಬೆಂಗಳೂರಿನ ವ್ಯಕ್ತಿಯನ್ನ ಜನವರಿ 3 ರಂದು ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿ 11:55 ಕ್ಕೆ ಆಸ್ಪತ್ರೆಯ ಸಿಬ್ಬಂದಿಗೆ ಹೇಳದೆ ಪರಾರಿಯಾಗಿದ್ದಾನೆ.

ಆಸ್ಪತ್ರೆ ಸಿಬ್ಬಂದಿ ಎಲ್ಲಾ ಕಡೇ ಹುಡುಕಾಡಿದ್ದಾರೆ ಆದರೆ ಆತನ ಪತ್ತೆಯಾಗಿಲ್ಲ, ಸರ್ಕಾರ ನಿಯಮ ಉಲ್ಲಂಘನೆ ಮತ್ತು ಬೇರೆಯವರಿಗೆ ಸೋಂಕು ಹರಡುತ್ತಾರೆ ಎಂಬ ಕಾರಣಕ್ಕೆ ಸೋಂಕಿತ ವ್ಯಕ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಣಿಪಾಲ್ ಆಸ್ಪತ್ರೆ ವೈದ್ಯರು ಪ್ರಕರಣ ದಾಖಲು ಮಾಡಿದ್ದಾರೆ.

Edited By : Nirmala Aralikatti
PublicNext

PublicNext

05/01/2022 04:47 pm

Cinque Terre

66.48 K

Cinque Terre

0

ಸಂಬಂಧಿತ ಸುದ್ದಿ