ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಎರಡು ದಶಕಗಳ ಕಾಲ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ರವಿಪೂಜಾರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕಳೆದ ಫೆಬ್ರವರಿಯಲ್ಲಿ ನಗರ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿಗಟ್ಟಿದ್ದರು.
ಇತ್ತೀಚೆಗೆ ರವಿಪೂಜಾರಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಜೈಲಾಸ್ಪತ್ರೆಗೆ ದಾಖಲಾಗಿದ್ದರು.
ತಪಾಸಣೆ ನಡೆಸಿದ ವೈದ್ಯರು ರವಿಪೂಜಾರಿಗೆ ಹಾರ್ನಿಯಾ ಸಮಸ್ಯೆಯಿದೆ.
ಹೆಚ್ಚಿನ ಚಿಕಿತ್ಸೆ ಬೇಕಿದೆ ಎಂದು ಜೈಲಾಧಿಕಾರಿಗಳಿಗೆ ವೈದ್ಯರು ವರದಿ ನೀಡಿದ್ದರು.
ವೈದ್ಯರ ಸೂಚನೆ ಮೇರೆಗೆ ವಿಕ್ಟೋರಿಯಾ ಆಸ್ಪತ್ರೆ ದಾಖಲಾಗಿದ್ದಾನೆ.
PublicNext
29/12/2020 06:16 pm