ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೋಗಿಗೆ ಇಂಜೆಕ್ಷನ್ ಕೊಟ್ಟ ಸೆಕ್ಯುರಿಟಿ ಗಾರ್ಡ್: ವಿಡಿಯೋ ವೈರಲ್

ಭುವನೇಶ್ವರ: ರೋಗಿಗೆ ಸೆಕ್ಯುರಿಟಿ ಗಾರ್ಡ್ ಒಬ್ಬ ಇಂಜೆಕ್ಷನ್ ಕೊಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಒಡಿಶಾದ ಅಂಗುಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಈ ಘಟನೆ ನಡೆದಿದೆ

ವ್ಯಕ್ತಿಯೊಬ್ಬರಿಗೆ ಸಣ್ಣ ಗಾಯವಾದಾಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ವೈದ್ಯರಿಲ್ಲದ ಕಾರಣ ಸೆಕ್ಯುರಿಟಿ ಗಾರ್ಡ್ ತಾನೇ ಮುಂದಾಗಿ ಇಂಜೆಕ್ಷನ್ ಕೊಟ್ಟಿದ್ದಾನೆ. ಇದನ್ನು ಗಾಯಾಳುವಿನ ಸಂಬಂಧಿಕರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.

ಈ ಬಗ್ಗೆ ಪ್ರಶ್ನೆ ಮಾಡಿದಾಗ.. ವಿಚಾರಣೆ ಆರಂಭಿಸಿದ್ದೇವೆ ಮತ್ತು ತನಿಖೆಯ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ಹೇಳಿದ್ದಾರೆ.

Edited By : Nagesh Gaonkar
PublicNext

PublicNext

10/09/2021 06:45 pm

Cinque Terre

249.46 K

Cinque Terre

12

ಸಂಬಂಧಿತ ಸುದ್ದಿ