ಚಿತ್ರದುರ್ಗ: ವೈದ್ಯೆಯ ನಿರ್ಲಕ್ಷದಿಂದಾಗಿ ಗರ್ಭಿಣಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿ ಗರ್ಭಿಣಿ ಮಹಿಳೆಯ ಪೋಷಕರು, ಸಂಬಂಧಿಕರು ಹಾಗೂ ಕರವೇ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಲತಾ ಮುರುಗೇಶ್ ಅವರು ಹೆರಿಗೆಗಾಗಿ ಕಳೆದ ಒಂದು ದಿನದ ಹಿಂದೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ವೈದ್ಯೆ ರೂಪಶ್ರೀ ಸಿಝೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಮಗುವನ್ನು ಹೊರಗೆ ತೆಗೆದಿದ್ದಾರೆ. ಹಿಂದೆಯೇ ರಕ್ತ ಸ್ರಾವವಾಗಿದ್ದು, ಈ ಸಮಯದಲ್ಲಿ ಗರ್ಭಿಣಿ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಸಂಬಂಧಿಕರಿಗೆ ತಿಳಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬಸವೇಶ್ವರ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು.
ಈ ಅವಘಡಕ್ಕೆ ಕಾರಣವಾದ ವೈದ್ಯರನ್ನು ಬಂಧಿಸಬೇಕು ಕಾನೂನಿನ ರೀತಿ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಕರು ಆಗ್ರಹಿಸಿದರು. ಈ ನಡುವೆ ಪೋಲಿಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಇತ್ತ ಮೃತ ಸಂಬಂಧಿಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಆನಂದ ಮೂರ್ತಿ ಮಾತಾನಾಡಿ ಮೃತಳ ಮರಣೋತ್ತರ ಪರೀಕ್ಷೆ ನಡೆಸಿ ವರದಿ ಬಂದ ಬಳಿಕ ವೈದ್ಯೆಯ ತಪ್ಪಾಗಿದೆ ಎಂದು ತಿಳಿದು ಬಂದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
PublicNext
15/09/2021 08:42 pm